ಮಿಗ್–21 ಯುದ್ಧ ವಿಮಾನ ಪತನ- ಇಬ್ಬರ ನಾಗರಿಕರ ಸಾವು

ನವದೆಹಲಿ: ರಾಜಸ್ಥಾನದ ಹನುಮಗಢ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಮಿಗ್–21 ಯುದ್ಧ ವಿಮಾನವು ಪತನಗೊಂಡಿದ್ದು, ಸ್ಥಳದಲ್ಲಿದ್ದ ಇಬ್ಬರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರುಕ್ಮಣಿ ರಿಯಾರ್ ತಿಳಿಸಿದ್ದಾರೆ.
ಹನುಮಗಢದ ಪಿಲಿಬಂಗಾ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಬಿಕನೇರ್ ಐಜಿಪಿ ಓಂ ಪ್ರಕಾಶ್ ತಿಳಿಸಿದ್ದಾರೆ.
ಜನರ ಸಾವು ತಪ್ಪಿಸಲು ಪೈಲಟ್ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನೂ ಮಾಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಎಂದು ಪ್ರಕಾಶ್ ಹೇಳಿದ್ದಾರೆ.