Mining: ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮಕ್ಕೆ ಸೂಚನೆ, ಡಿಸೆಂಬರ್ ಅಂತ್ಯಕ್ಕೆ 19 ಬ್ಲಾಕಿನಿಂದ ಮರಳು ಲಭ್ಯ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35;
ದಾವಣಗೆರೆ (Mining): ದಾವಣಗೆರೆ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಹಲವು ದೂರುಗಳು ಕೇಳಿ ಬರುತ್ತಿವೆ. ಹಾಗಾಗಿ ಅಂತವರ ಮೇಲೆ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ನಿಯಮಾನುಸಾರ ವೇ-ಬ್ರಿಡ್ಜ್ಗಳಲ್ಲಿ ತೂಕ ನಿರ್ದಿಷ್ಟವಾಗಿದ್ದರೂ, ತದನಂತರ ನಿಗದಿತ ತೂಕಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಣೆ ಮಾಡಲಾಗುತ್ತಿದೆ. ಅಲ್ಲದೇ ವಾಹನಗಳ ಮೇಲ್ಪದರಗಳಲ್ಲಿ ಎಂ ಸ್ಯಾಂಡ್ ಮತ್ತು ಮಧ್ಯ ಭಾಗದಲ್ಲಿ ಮರಳು ತುಂಬಿ, ಎಂ ಸ್ಯಾಂಡ್ ರೂಪದಲ್ಲಿ ಮರಳು ಸಾಗಾಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಜಿಲ್ಲೆಯಲ್ಲಿ 24 ಮರಳು ಬ್ಲಾಕ್ ಗಳನ್ನು ಗುರುತಿಸಿ ಟೆಂಡರ್ ಅಂತಿಮಗೊಳಿಸಲಾಗಿದೆ.ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.
19 ಮರಳು ಬ್ಲಾಕ್‍ಗಳಿಗೆ ಟೆಂಡರ್:
ಜಿಲ್ಲಾದ್ಯಾಂತ ಒಟ್ಟು 24 ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈ ಪೈಕಿ 4 ಬ್ಲಾಕ್ ಸರ್ಕಾರಿ ಕಾಮಗಾರಿಗಳಿಗೆ, 19 ಬ್ಲಾಕ್‍ಗಳು ಸಾರ್ವಜನಿಕ ಉಪಯೋಗಕ್ಕೆ ನಿಗದಿಪಡಿಸಿದ್ದು, ಟೆಂಡರ್ ಅಂತಿಮವಾಗಿದೆ. ಇನ್ನೂ ಒಂದು ಬ್ಲಾಕ್ ಮಾತ್ರ ಬಾಕಿ ಇದೆ. ಟೆಂಡರ್‍ದಾರರು ಷರತ್ತುಗಳನ್ವಯ ಮರಳು ಪೂರೈಕೆ ಮಾಡಲಾಗುತ್ತದೆ.
ಬ್ಲಾಕ್ ವಿವರ: ಹರಿಹರ ತಾಲ್ಲೂಕಿನ ಗೋವಿನಾಳು, ಎಲೆಹೊಳೆ, ಚಿಕ್ಕಬಿದರೆ, ಗುತ್ತೂರು, ಮಳಲಹಳ್ಳಿ ಹಾಗೂ ಬಿಲಾಸನೂರು, ಹೊನ್ನಾಳಿ ತಾಲ್ಲೂಕಿನ ಬುಳ್ಳಾಪುರ, ಚಿಕ್ಕಬಸಾಪುರ, ರಾಂಪುರ, ಬಿಳೆಮಲ್ಲೂರು, ಹಿರೇಬಸೂರು, ಬುಳ್ಳಾಪುರ, ಬೀರಗೊಂಡನಹಳ್ಳಿ ಮತ್ತು ಬಾಗೇವಾಡಿ ವ್ಯಾಪ್ತಿಯಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಗೋವಿನಕೋವಿ, ಮಾರಿಗೊಂಡನಹಳ್ಳಿ, ತಗ್ಗಿಹಳ್ಳಿ ಮತ್ತು ಕೋಟೆಹಾಳ್‍ನಲ್ಲಿ ಮರಳು ಬ್ಲಾಕ್ ಗುರುತಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.