ಪಟ್ಟಣದಲ್ಲಿ ಮಾತನಾಡಿದ ಅವರು ರೇಣುಕಾಚಾರ್ಯ ಪ್ರಚಾರ ಪ್ರಿಯರು, ಅಧಿಕಾರ ಇರಲಿ ಬಿಡಲಿ ಅವರಿಗೆ ಪ್ರಚಾರ ಬೇಕು ಹೀಗಾಗಿ ಸಚಿವರ ಭೇಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಕಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಸಮಸ್ಯೆಗಳ ನೆಪದಲ್ಲಿ ಸಚಿವರುಗಳನ್ನ ಭೇಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನೇ ಆಯ್ಕೆ ಮಾಡದ ಬಿಜೆಪಿ ಪಕ್ಷ ನಾವಿಕನಿಲ್ಲದ ದೋಣಿಯಾಗಿದ್ದು ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು
ರೇಣುಕಾಚಾರ್ಯ ಮುಂದಾಗುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಸಚಿವರು ಪ್ರಾಮುಖ್ಯತೆ ನೀಡಬಾರದು.
ಕಾಂಗ್ರೆಸ್ ಶಾಸಕರಿಗೆ ಸಚಿವರನ್ನ ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ, ಕೊನೆ ಪಕ್ಷ ಸಚಿವರುಗಳಿಗೆ ಫೋನ್ ಕರೆ ಮಾಡಿದರೂ ರೆಸ್ಪಾನ್ಸ್ ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ಮಾಜಿ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗುತ್ತಿದೆ. ಸಚಿವರನ್ನ ಭೇಟಿ ಮಾಡಿರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪ್ರಚಾರ ಪಡೆಯುತ್ತಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ. ಇಂಥವರಿಗೆ ಕಾಂಗ್ರೆಸ್ ನಾಯಕರು ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದು ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು.