ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಿಗೆ ಕೋವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ
![education minister b c nagesh](https://garudavoice.com/wp-content/uploads/2022/01/WhatsApp-Image-2022-01-01-at-6.33.07-PM.jpeg)
ದಾವಣಗೆರೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿರುವ ಸಚಿವರು ಲಘು ಲಕ್ಷಣಗಳಿರುವ ಕಾರಣ ತಾವು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ ತಮಗೆ ಕೋವಿಡ್ ದೃಢಪಟ್ಟಿದೆ.
ಆದ್ದರಿಂದ, ತಾವು ಅಗತ್ಯ ಚಿಕಿತ್ಸೆಯೊಂದಿಗೆ ಕ್ವಾರಂಟೈನ್ ಲ್ಲಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ.