ದಾವಣಗೆರೆ ವಡೇರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರ ಭೇಟಿ

ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರ್ ಅವರು ವಡೇರಹಳ್ಳಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ, (ಪ.ಜಾತಿ) ಗೆ ಭೇಟಿ ನೀಡಿ ಶಾಲಾ ಪ್ರಾಂಶುಪಾಲರು ಮತ್ತು ಶಿಕ್ಷಕರೊಂದಿಗೆ ಶಾಲಾ ಶೈಕ್ಷಣಿಕ ಪ್ರಗತಿ, ಎಸ್.ಎಸ್.ಎಲ್.ಸಿ ಫಲಿತಾಂಶ ಹಾಗೂ ಇತರೆ ಶಾಲಾ ವಿಚಾರಗಳ ಬಗ್ಗೆ ಚರ್ಚಿಸಿದರು.

ನಂತರ ಸಚಿವರ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿನಿಯರ ಸ್ವಯಂ ರಕ್ಷಣೆಗಾಗಿ ರೂಪಿಸಿರುವ ಕರಾಟೆಯ ಕೆಲವು ಕೌಶಲ್ಯಗಳನ್ನು ಮಾಡುವುದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಜೊತೆಗೂಡಿ ಬೆಳಗಿನ ಉಪಹಾರ ಸೇವಿಸಿ, ಮೆಚ್ಚುಗೆ ವ್ಯಕ್ತಪಡಿಸಿ ಶಾಲಾ ಶೈಕ್ಷಣಿಕ ವಿಭಾಗಗಳನ್ನು ವೀಕ್ಷಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟು ವಿದ್ಯಾರ್ಥಿಗಳ ಜೊತೆಗೂಡಿ ಬೆಳಗಿನ ಉಪಹಾರ ಸೇವಿಸಿ, ಸಚಿವರ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿನಿಯರ ಸ್ವಯಂ ರಕ್ಷಣೆಗಾಗಿ ಕರಾಟೆ ಕೌಶಲ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಇಲಾಖೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಬಾರಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಶ್ರಮವಹಿಸಬೇಕೆಂದು ಸೂಚಿಸಿದರು. ಜಿಲ್ಲೆಯಲ್ಲಿ ಕೈಗೊಳ್ಳಲಾದ ವಸತಿ ಶಾಲೆಗಳ ಹಾಗೂ ವಿದ್ಯಾರ್ಥಿನಿಲಯಗಳ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ವಿವಿಧ ಕಾರ್ಯಕ್ರಮಗಳಡಿ ಕೈಗೊಳ್ಳಲಾದ ಭವನ ನಿರ್ಮಾಣ ಕಾಮಗಾರಿಗಳು, ಕಾಲೋನಿಗಳಿಗೆ ಹಾಗೂ ಸ್ಮಶಾನ ಭೂಮಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ದಾವಣಗೆರ ಜಿಲ್ಲೆಗೆ ಶೀಘ್ರವಾಗಿ 2 ವಿಜ್ಞಾನ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರುಮಾಡುವ ಬಗೆಗಿನ ಮನವಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೋ|| ಲಿಂಗಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೌಸರ್ ರೇಷ್ಮಾ ಜಿ., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಯಾದ ಮಂಜನಾಯ್ಕ, ಪ್ರಾಂಶುಪಾಲರಾದ ದೀಪಾ ಜಕಾತಿ, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!