ಜಲಜೀವನ್ ಮಿಶನ್ ಮತ್ತು ಮನ್ರೇಗಾ ಅಭಿವೃದ್ಧಿ ಬಗ್ಗೆ ಸಚಿವ ಈಶ್ವರಪ್ಪ ಸಂತಸ

ದಾವಣಗೆರೆ: ಜಲಜೀವನ್ ಮಿಷನ್ – ಮನೆಮನೆಗೂ ಗಂಗೆ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸಿನ ಯೋಜನೆಯಾದ ಮನೆ ಮನೆಗೂ ಗಂಗೆ
(ಜಲಜೀವನ ಮಿಷನ್) ಕರ್ನಾಟಕ ರಾಜ್ಯದಲ್ಲಿ ಅತಿ ವೇಗವಾಗಿ ಅನುಷ್ಠಾನವಾಗುತ್ತಿರುವ ಸುದ್ದಿಯನ್ನು ಹಂಚಿಕೊಳ್ಳಲು ಸಂತಸವಾಗುತ್ತದೆ.
ಈ ಯೋಜನೆಯ ಅನುಷ್ಠಾನ ದಲ್ಲಿ 9/02/2022 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದೇ ಬಾರಿಗೆ 16 ಯೋಜನೆಗಳಿಗೆ ಅನುಮೋದನೆ ಪಡೆದು ಒಂದು ರೀತಿಯ ದಾಖಲೆಯನ್ನು ಮಾಡಲಾಗಿದೆ.
ಇದರಿಂದಾಗಿ 6,357 ಹಳ್ಳಿಗಳ 6,17,607 ಮನೆಗಳಿಗೆ ಕೊಳಾಯಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತದೆ.
ಇಲ್ಲಿಯತನಕ ಒಟ್ಟು 45.44ಲಕ್ಷ ಮನೆಗಳಿಗೆ ನೀರು ಸಂಪರ್ಕ ನೀಡಲಾಗಿದೆ. ಕೇವಲ 2020-21 ರಲ್ಲಿ 3.43ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ದೊರೆತಿದೆ. 
2021-22 ರಲ್ಲಿ 25.17 ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ನೀಡುವ ಗುರಿಯನ್ನು ಹೊಂದಲಾಗಿದ್ದು ಈಗಾಗಲೇ 17.60ಲಕ್ಷ ಕುಟುಂಬಗಳಿಗೆ ಮನೆಯಲ್ಲಿ ಕೋಳಾಯಿ ಸಂಪರ್ಕ ನೀಡಲಾಗಿದೆ. 2022-23 ರಲ್ಲಿ 27.14 ಲಕ್ಷ ಮತ್ತು 23-24ರಲ್ಲಿ 17.45ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಕಲ್ಪಿಸಿ ಇಡಿ ರಾಜ್ಯದ 97.91 ಲಕ್ಷ್ಲ ಗ್ರಾಮೀಣ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು.
ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿವರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯ 2021-22 ಸಾಲಿನ ಸಾಧನೆಗಳ ವಿವರ;
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುಮೋದಿಸಿದ್ದ 13 ಕೋಟಿ ಮಾನವ ದಿನಗಳನ್ನು ಡಿಸಂಬರ್ ತಿಂಗಳಿನಲ್ಲಿಯೇ ಪೂರ್ಣಗೊಳಿಸಿದ ತರುವಾಯ ಮತ್ತೆ 1.40 ಕೋಟಿ ಮಾನವ ದಿನಗಳ ಹೆಚ್ಚುವರಿ ಉದ್ಯೋಗ ನೀಡಲು ರಾಜ್ಯಕ್ಕೆ ಹೆಚ್ಚುವರಿಯಾಗಿ ರೂ 715 ಕೋಟಿ ಅನುದಾನ ಲಭ್ಯವಾಯಿತು.
32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. 30.05 ಲಕ್ಷ ಮಹಿಳೆಯರು 5.80 ಲಕ್ಷ ಹಿರಿಯ ನಾಗರಿಕರಿಗೆ ಮತ್ತು 22,400 ಲಕ್ಷ ಕ್ಕೂ ಹೆಚ್ಚು ವಿಶೇಷ ಚೇತನದವರಿಗೆ ಉದ್ಯೋಗ ನೀಡಲಾಗಿದೆ.
ಒಟ್ಟು 4,064 ಕೋಟಿ ಕೂಲಿ ಹಣದ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ.
ಈ ವರ್ಷ ದಾಖಲೆಯ 13.61 ಲಕ್ಷ ಕಾಮಗಾರಿಗಳನ್ನು ತೆಗೆದುಕೊಂಡು ಈಗಾಗಲೆ 4.31 ಲಕ್ಷ ಕಾಮಗಾರಿಗಳನ್ನು ಪೂರ್ಣ ಮಾಡಲಾಗಿದೆ.
ಕೊರೊನಾ ಸಾಂಕ್ರಾಮಿಕದಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕರಿಗೆ ಕೆಲಸ ಒದಗಿಸುವುದರಲ್ಲಿ ನಾವು ಸಫಲರಾಗಿದ್ದೇವೆ.
ಜಲಶಕ್ತಿ ಅಭಿಯಾನದಲ್ಲಿ ರಾಜ್ಯದಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡು 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ನಾವು ದೇಶದಲ್ಲೇ ಮೊದಲನೇ ಸ್ಥಾನದಲ್ಲಿ ಇದ್ದೇವೆ.
ನರೇಗಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದಿಂದ ಕಳೆದ 6 ವರ್ಷದಲ್ಲಿ 3,275 ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಕೈಗೆತ್ತಿಕೊಂಡು 2,335 ಕಟ್ಟಡಗಳು ಪೂರ್ಣಗೊಳಿಸಲಾಗಿದೆ.

 
                         
                       
                       
                       
                       
                      