ಸಚಿವ ಡಾ. ಕೆ. ಸುಧಾಕರ್ ಅವರಿಂದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿಗಳ ಪರಿಶೀಲನೆ

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು ಶನಿವಾರ ತಾಲೂಕಿನ ಅರುರೂ ಬಳಿ ನೂತನವಾಗಿ ನಿರ್ಮಾಣ ಆಗುತ್ತಿರುವ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಟ್ಟಡ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ (ಬಾಬು), ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ತಾಲ್ಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರೀಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.