ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸ್ವಾಗತಕ್ಕೆ ಭರ್ಜರಿ ತಯಾರಿ ನಡೆಸಿದ ಜಿಲ್ಲಾ ಕಾಂಗ್ರೆಸ್

ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸ್ವಾಗತಕ್ಕೆ ಭರ್ಜರಿ ತಯಾರಿ ನಡೆಸಿದ ಜಿಲ್ಲಾ ಕಾಂಗ್ರೆಸ್

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ ಸಚಿವರಾಗಿ ಸ್ವೀಕರಿಸಿ ಇದೇ ಜೂನ್ 3 ರಂದು ದಾವಣಗೆರೆ ನಗರಕ್ಕೆ ಆಗಮಿಸಲಿದ್ದು, ಅವರನ್ನು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ‍್ಯಕರ್ತರು ಮತ್ತು ಅಭಿಮಾನಿಗಳು ಸಭೆ ಸೇರಿ ಅದ್ದೂರಿಯಾಗಿ ಸ್ವಾಗತಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ತಿಳಿಸಿದ್ದಾರೆ.

ಅಂದು ಮದ್ಯಾಹ್ನ 3 ಗಂಟೆಗೆ ದಾವಣಗೆರೆ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಮೆರವಣಿಗೆ ನಡೆಸಲಾಗುವುದು.

ಈ ಮೆರವಣಿಗೆಯೂ ದಾವಣಗೆರೆ ಜಿಲ್ಲಾ ಪಂಚಾಯತ್, ಮುಂಭಾಗ ಪ್ರಾರಂಭವಾಗಿ ಗಣೇಶ ದೇವಸ್ಥಾನ ಹದಡಿ ರಸ್ತೆ, ಐ.ಟಿ.ಐ. ಕಾಲೇಜ್ ಮುಂಭಾಗದಿಂದ   60 ಅಡಿ ರಸ್ತೆಯ ಮುಖಾಂತರ ನಿಟುವಳ್ಳಿ ದುರ್ಗಾಂಭಿಕ ಸರ್ಕಲ್. ನಿಟುವಳ್ಳಿ ಆರ್.ಎಸ್. ಶೇಖರಪ್ಪನವರ ಮನೆ ಮುಂಭಾಗ, ಕೊಂಡಜ್ಜಿ ಬಸಪ್ಪ ಸರ್ಕಲ್ ಹದಡಿ ರಸ್ತೆ, ವಿದ್ಯಾರ್ಥಿ ಭವನ ಸರ್ಕಲ್, ಹದಡಿ ರಸ್ತೆ, ಕೆ.ಇ.ಬಿ. ಸರ್ಕಲ್, (ಅಂಬೇಡ್ಕರ್ ಸರ್ಕಲ್) ಹದಡಿ ರಸ್ತೆ, ಜಯದೇವ ಸರ್ಕಲ್, ಮಹಾನಗರ ಪಾಲಿಕೆ ಕಛೇರಿ   ಮುಂಭಾಗದಿಂದ ಅರುಣ್ ಸರ್ಕಲ್ ಮುಖಾಂತರ ರೈಲ್ವೆಗೇಟ್ ಮುಖಾಂತರ ಹೊಂಡದ ಸರ್ಕಲ್, ದುರ್ಗಾಂಭಿಕ ದೇವಸ್ಥಾನ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಅಜಾದ್‌ನಗರ ಮುಖ್ಯರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್‌ಗೆ ಮುಕ್ತಾಯವಾಗಲಿದೆ.

ಈ ಮೆರವಣಿಗೆಯಲ್ಲಿ ಶಾಸಕರುಗಳಾದ ದಾವಣಗೆರೆ ದಕ್ಷಿಣದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಯಕೊಂಡದ ಕೆ.ಎಸ್.ಬಸವಂತಪ್ಪ, ಚನ್ನಗಿರಿಯ ಶಿವಗಂಗಾ ಬಸವರಾಜ್, ಹೊನ್ನಾಳಿಯ ಡಿ.ಜಿ.ಶಾಂತನಗೌಡ, ಜಗಳೂರಿನ ದೇವೆಂದ್ರಪ್ಪ, ಹರಪನಹಳ್ಳಿಯ ಶ್ರೀಮತಿ ಲತಾ ಮಲ್ಲಿಕಾರ್ಜುನ್, ಮಾಜಿ ಶಾಸಕರಾದ ಎಸ್.ರಾಮಪ್ಪ, ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳಾಗಿದ್ದ ಹರಿಹರದ ನಂದಿಗಾವಿ ಶ್ರೀನಿವಾಸ್, ಹರಪನಹಳ್ಳಿಯ ಅರಸೀಕೆರೆ ಕೊಟ್ರೇಶ್ ಅವರು ಸಹ ಭಾಗವಹಿಸುವರು.

ಮಲ್ಲಿಕಾರ್ಜುನ್ ಅವರು 1998ರಿಂದ ಶಾಸಕರಾಗಿ, 2 ಬಾರಿ ಸಚಿವರಾಗಿ ದಾವಣಗೆರೆ ಜಿಲ್ಲೆಯನ್ನು ದೇಶ ತಿರುಗಿ ನೋಡುವಂತೆ ಅಭಿವೃದ್ಧಿ ಮಾಡಿದ್ದರು. ಇದೀಗ 3ನೇ ಬಾರಿಗೆ ಸಚಿವರಾಗಿದ್ದು, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾಗಿದ್ದು, ದಾವಣಗೆರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಆದ ಕಾರಣ ಆದ ಕಾರಣ ಪಕ್ಷದ ಜನಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲಾ, ತಾಲ್ಲೂಕು ಪಂಚಾಯತ್, ಎಪಿಎಂಸಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರುಗಳು ಮತ್ತು ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು ವಾರ್ಡ್, ಪಂಚಾಯತ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್.ಎಸ್.ಯು.ಐ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಸೇವಾದಳ, ವಿಕಲಚೇತನ, ಡಾಕ್ಟರ್, ವಕೀಲರ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!