ಮನೆ ಕಳೆದುಕೊಂಡ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವ: ಸರ್ಕಾರದಿಂದ ಶೀಘ್ರವಾಗಿ ಪರಿಹಾರ ಮಂಜೂರು – ಬೈರತಿ ಬಸವರಾಜ್

IMG-20210806-WA0014

ದಾವಣಗೆರೆ: ಮಳೆರಾಯನ ಆರ್ಭಟದಿಂದ ಸೂರು ಕಳೆದುಕೊಂಡ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮನೆ ಕಳೆದುಕೊಂಡವರಿಗೆ ಉಳಿದುಕೊಳ್ಳಲು ಪರ್ಯಾಯ ಮತ್ತು ಊಟದ ವ್ಯವಸ್ಥೆ ಮತ್ತು ಹಾನಿಗೆ ತಕ್ಕಂತೆ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಜಿಲ್ಲಾಡಳಿತಕ್ಕೆ ಆದೇಶಿಸಿದರು.

ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ಹಾನಿಗೊಳಗಾದ ಕೆಲ ಸ್ಥಳಗಳನ್ನು ವೀಕ್ಷಣೆ ಮಾಡಿ ನೈಜ ಪರಿಸ್ಥಿತಿಯನ್ನು ಅವಲೋಕಿಸಿದ ಭೈರತಿ ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಧೈರ್ಯ ಹೇಳಿ, ಅವರಿಗೆ ಪರ್ಯಾಯ ಒದಗಿಸುವಂತೆ ಸೂಚಿಸಿದರು.

ಮಳೆಯಿಂದಾಗಿ ಜೀವನ ಅಸ್ತವ್ಯಸ್ತಗೊಂಡಿದ್ದು, ಸುರಿದ ಭಾರೀ ಮಳೆಯಿಂದಾಗಿ ಮನೆಗಳು ನೆಲಸಮಗೊಂಡಿವೆ. ಇದರಿಂದ ಕುಟುಂಬ ಬೀದಿಗೆ ಬಂದಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ಸಚಿವರ ಬಳಿ ತೊಡಿಕೊಂಡರು.

ಸಚಿವ ಭೈರತಿ ಬಸವರಾಜ್ ಅವರು ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಹರಿಹರ ತಹಶಿಲ್ದಾರ ಹಾಗೂ ಇತರೆ ಅಧಿಕಾರಿ ವರ್ಗದವರಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲಾ ಪಂಚಾಯತ ಸಿಇಓ ವಿಜಯ ಮಹಾಂತೇಶ್, ಪೋಲಿಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಹಲ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!