ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಐಟಿ ದಾಳಿ: ರೋಷನ್ ಬೇಗ್ ಮನೆಯಲ್ಲಿ ಇಡಿ

ಬೆಂಗಳೂರು: ಇಂದು ಮುಂಜಾನೆ ಶಾಸಕ ಜಮೀರ್ ಅಹಮದ್ ಬಂಬುಬಜಾರ್ ರಸ್ತೆಯಲ್ಲಿರುವ ಮನೆ ಹಾಗೂ ನ್ಯಾಷನಲ್ ಟ್ರಾವೆಲ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎರಡು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ನ್ಯಾಷನಲ್ ಟ್ರಾವೆಲ್ಸ್ ಅವರ ವ್ಯವಹಾರಗಳ ಕಡತಗಳು ಹಾಗೂ ಮಗ ಮತ್ತು ಪತ್ನಿಯ ಹೆಸರಿನಲ್ಲಿ ಇರುವಂತಹ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಶಿವಾಜಿನಗರದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!