ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ – ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಡಿ.೧೦ ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಈ ದಿನಗಳನ್ನು ಶುಷ್ಕದಿವಸಗಳೆಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತ ನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಡಿ. ೧೦ರ ಸಂಜೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿದೆ. ಆದ್ದರಿಂದ, ಜಿಲ್ಲೆಯಾದ್ಯಂತ ಮದ್ಯವನ್ನು ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಹಾಗೂ ಯಾವುದೇ ಇತರ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.