ಮಾಡಾಳು ವಿರುಪಾಕ್ಷಪ್ಪ ರಿಗೆ ಜಾಮೀನು ಮಂಜೂರು
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಟೆಂಡರ್ ಗಾಗಿ ಲಂಚ ಪಡೆದ ಆರೋಪದಲ್ಲಿ ಬಂಧಿನದಲ್ಲಿದ್ದ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಮೂರ್ತಿ ನ್ಯಾ. ಜಯಂತ್ ಕುಮಾರ್ ಅವರು ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಜತೆಗೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಲೋಕಾಯುಕ್ತ ದಾಳಿ ವೇಳೆ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷರಪ್ಪರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.