ಚನ್ನಗಿರಿ ಶಾಸಕರಿಂದ ಹಾನಗಲ್ ನಲ್ಲಿ ಶಿವರಾಜ್ ಸಜ್ಜನ್ ಪರ ಪ್ರಚಾರ
ಹಾವೇರಿ: ಹಾನಗಲ್, ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಮತ ಪ್ರಚಾರ ದಿನದಿನಕ್ಕೂ ರಂಗೇರುತ್ತಿದ್ದು, ಇಂದು ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಪರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತಯಾಚನೆ ಮಾಡಿದರು.
ಸಜ್ಜನರ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಶಿವಕುಮಾರ್ ಉದಾಸಿ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಎಂ. ಚಂದ್ರಪ್ಪ, ಶಾಸಕ ಗೂಳಿಹಟ್ಟಿ ಶೇಖರ್ ಅವರು ಪಾಲ್ಗೊಂಡು ಅಭ್ಯರ್ಥಿ ಪರ ಮತಪ್ರಚಾರ ಮಾಡಿದರು.