ಮೋದಿ ಸಾಕ್ಷ್ಯಚಿತ್ರ ನಿರ್ಬಂಧ ಸಮರ್ಥಿಸಿದ ಎ.ಕೆ. ಆಂಟನಿ ಪುತ್ರ ಅನಿಲ್ ಕೆ. ಆಂಟನಿ.! ಕಾಂಗ್ರೆಸ್ ಗೆ ರಾಜಿನಾಮೆ

Modi documentary ban justified by A.K. Antony's son Anil K. Anthony! Resignation to Congress

ತಿರುವನಂತಪುರ: ಇಂಡಿಯಾ: ದಿ ಮೋದಿ ಕ್ವೆಶ್ವನ್ (ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಾಚಿತ್ರ) ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಕೆ. ಆಂಟನಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಅನಿಲ್ ಟ್ವೀಟ್ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ನಿಂದಲೇ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಎಲ್ಲ ಹುದ್ದೆಗಳಿಗೆ ಅನಿಲ್ ರಾಜೀನಾಮೆ ನೀಡಿದ್ದಾರೆ.
ಟ್ವೀಟ್ ಮೂಲಕ ರಾಜೀನಾಮೆ ಘೋಷಣೆ ಮಾಡಿರುವ ಅನಿಲ್, ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಮಾಡಿದ ಟ್ವೀಟ್ ಅನ್ನು ಹಿಂತೆಗೆದುಕೊಳ್ಳಲು ಅಸಹಿಷ್ಣುತೆಯ ಕರೆಗಳು ಮತ್ತು ಫೇಸ್‌ಬುಕ್‌‌ನಲ್ಲಿ ದ್ವೇಷ/ ನಿಂದನೆ ಬರುತ್ತಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!