ಶಾಲಾ ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಿ ಮೊಹಮ್ಮದ್ ಜಿಕ್ರಿಯಾ

Mohammad Zikria should provide basic facilities to school children and give more emphasis to education

ಮೊಹಮ್ಮದ್ ಜಿಕ್ರಿಯಾ

ದಾವಣಗೆರೆ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರವು ತನ್ನ ಅವಧಿಯ ಕೊನೆಯ ಬಜೆಟ್ ಮಂಡಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು ಈ ಬಾರಿಯಾದರೂ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಬೇಕೆಂದು ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ಜಿಕ್ರಿಯಾ ಮನವಿ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಕೊರೊನಾ ಹಾಗೂ ಇನ್ನಿತರೆ ಬೇರೆ ಬೇರೆ ನೆಪವೊಡ್ಡಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರಿಯಾಗಿ ಸಮವಸ್ತ್ರ,ಮಧ್ಯಾಹ್ನದ ಊಟ,ಶೂ ಸಾಕ್ಸ್ ಗಳನ್ನೂ ಸಹ ನೀಡದೆ ಮಕ್ಕಳಿಗೆ ಅನ್ಯಾಯವೆಸಗಿದೆ, ಸುಧಾರಿತ ಮೂಲಭೂತ ಪೀಠೋಪಕರಣಗಳು ಕ್ರೀಡಾ ಸಾಮಗ್ರಿಗಳನ್ನು ಒದಗಿಸುವ ಮೂಲಕ ಖಾಸಗಿ ಶಾಲೆಗಳು ಮತ್ತು ಸರ್ಕಾರಿ ಶಾಲಾ ಮಕ್ಕಳ ನಡುವಿನ ತಾರತಮ್ಯವನ್ನು ಹಾಗೂ ಮಕ್ಕಳ ಮನಸ್ಸಿನಲ್ಲಿ ಕೀಳಿರಿಮೆ ಬರದಂತೆ ನೋಡಿಕೊಳ್ಳ ಬೇಕು ಆದ್ದರಿಂದ ಈ ಕೊನೆಯ ಬಜೆಟ್ ನಲ್ಲಾದರೂ ಈ ಎಲ್ಲಾ ಸೌಲಭ್ಯಗಳನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲು ವಿಶೇಷ ಅನುದಾನ ಮೀಸಲಿಡಬೇಕು ಇಲ್ಲದಿದ್ದರೆ ಮಕ್ಕಳಲ್ಲಿ ಕಲಿಕಾಸಕ್ತಿ ಕಡಿಮೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ನಂತರ ಹಲವು ಸರ್ಕಾರಿ ಶಾಲೆಗಳನ್ನು ನಿರ್ಲಕ್ಷ್ಯವಹಿಸಿದ್ದು ಇದು ಸರಿಯಲ್ಲ ಸರ್ಕಾರಿ ಶಾಲೆಗಳ ಮಕ್ಕಳು ಮೂಲಭೂತ ಸೌಲಭ್ಯ ವಂಚಿತರಾಗಿದ್ದರೂ ಸಹ ಫಲಿತಾಂಶದಲ್ಲಿ ಕಡಿಮೆಯಾಗಿದ್ದಿಲ್ಲ ಓದುವ ಆಸಕ್ತಿ ಕಡಿಮೆಯಾಗಿದ್ದಿಲ್ಲ ಅಂಥಾ ಮಕ್ಕಳಿಗೆ ಸರ್ಕಾರ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಿದರೆ ಮಕ್ಕಳ ಯಶಸ್ಸಿಗೆ ಸಹಕರಿಸಿದಂತಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಹಲವಾರು ವಿಷಯಗಳಿಂದಾಗಿ ಶಾಲಾ ಮಕ್ಕಳಲ್ಲಿ,ಹಾಗೂ ಪೋಷಕರಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ, ಪಠ್ಯಪುಸ್ತಕದ ವಿಚಾರ,ಹೊಸ ಶಿಕ್ಷಣ ನೀತಿ ಜಾರಿಗೆ ತರುವ ವಿಚಾರ,ಹೀಗೆ ಅನೇಕ ವಿಷಯಗಳಿಂದ ಮಕ್ಕಳ ಮನಸ್ಸಲ್ಲಿ ಆತಂಕ ಸೃಷ್ಟಿಯಾಗಿದ್ದು ಇದರಿಂದಾಗಿ ಕಲಿಕಾಸಕ್ತಿ ಕಡಿಮೆಯಾಗುತ್ತಿದೆ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಶಾಲಾ ಮಕ್ಕಳಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿಯೇ ವಿಶೇಷ ಅನುದಾನ ಘೋಷಣೆ ಮಾಡಬೇಕು ಇಲ್ಲದಿದ್ದರೆ ಮಕ್ಕಳ ವಿದ್ಯಾಭ್ಯಾಸದ ಬದುಕು ಕೊನೆಗೊಳ್ಳಲು ಸರ್ಕಾರವೇ ನೇರ ಕಾರಣವಾಗುತ್ತದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!