ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮೊಹಮ್ಮದ್ ಸಮಿವುಲ್ಲಾ ನೇಮಕ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮೊಹಮ್ಮದ್ ಸಮಿವುಲ್ಲಾ ರವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷರಾದ ಎಂ.ಬಿ.ಮಂಜಪ್ಪನವರು ಆದೇಶ ಹೊರಡಿಸಿದ್ದಾರೆ.

ಮೊಹಮ್ಮದ್ ಸಮಿವುಲ್ಲಾ ರವರು ಹಿಂದೆ ಅನೇಕ ಸಮಾಜ ಮುಖಿ ಸೇವೆಗಳ ಮೂಲಕ ಹೆಸರುವಾಸಿಯಾಗಿದ್ದರು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ್ ರವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇವರ ಸೇವೆಯನ್ನು ಮನಗಂಡ ಮಾಜಿ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ ರವರು ಹಾಗೂ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಆದೇಶದಂತೆ ಮೊಹಮ್ಮದ್ ಸಮಿವುಲ್ಲಾ ರವರನ್ನು ದಾವಣಗೆರೆ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!