ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಜೊತೆಗೆ ವಿಶೇಷ ಹೆಲಿಕಾಪ್ಟರ್ ಸಹ ನೀಡಲಾಗಿದೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ವಿಜಯೇಂದ್ರ, 20 ಅಸೆಂಬ್ಲಿ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲು ವಿಶೇಷವಾದ ಹೆಲಿಕಾಪ್ಟರ್ ವೊಂದನ್ನು ಒದಗಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.
ಲಿಂಗಾಯತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ವಿಜಯೇಂದ್ರ ಪ್ರಚಾರ ನಡೆಸಲಿದ್ದು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಮತ್ತಿತರ ಜಿಲ್ಲೆಗಳಲ್ಲಿ ಪ್ರಚಾರ ನಡೆಸುವಂತೆ ಅವರಿಗೆ ಬಿಜೆಪಿ ಹೈಕಮಾಂಡ್ ನಿರ್ದೇಶನ ನೀಡಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
