ಡಾ.ವೆಂಕಟೇಶ್ ಬಾಬು ಎಸ್ ರವರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ದಾವಣಗೆರೆ: ನಗರದ ಜೈನ್ ಟ್ರಿನಿಟಿ ಕಾಲೇಜ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನಡೆದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ವೆಂಕಟೇಶ್ ಬಾಬು ಎಸ್ ರವರು ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅವರು ತಮ್ಮ ಪ್ರೇರಣಾತ್ಮಕ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಗುರಿ ಹೊಂದುವುದು, ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು, ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಅದರ ಪ್ರಾಮುಖ್ಯತೆಯನ್ನು ಉಳಿಸಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಿದರು.
ತಮ್ಮ ಭಾಷಣದಲ್ಲಿ, ಅವರು ಹೆಚ್ಚಾಗಿ ಬೌದ್ಧಿಕತೆ ಮತ್ತು ನೈತಿಕತೆಯ ಮೌಲ್ಯಗಳನ್ನು ಒತ್ತಿ ಹೇಳಿದರು, “ವಿದ್ಯಾಭ್ಯಾಸವು ಕೇವಲ ಅಂಕಗಣಿತ ಅಥವಾ ವಿಜ್ಞಾನವಲ್ಲ, ಅದು ನೈತಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ, ಮತ್ತು ಸಮಾಜಕ್ಕೆ ಸರಿಯಾದ ರೀತಿಯಲ್ಲಿ ಕೊಡುಗೆ ನೀಡುವ ಸಾಮರ್ಥ್ಯವನ್ನು ಬೆಳೆಸುವುದಾಗಿರಬೇಕು.”
ಅವರ ಮಾತುಗಳು ವಿದ್ಯಾರ್ಥಿಗಳಲ್ಲಿ ಮುಂದಿನ ದಿನಗಳಲ್ಲಿ ದೇಶದ ಪರಿವರ್ತನೆಗೆ ಪ್ರಮುಖ ಪಾತ್ರವಹಿಸುವಂತಹ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಪ್ರೇರಣೆಯಾಗಿ ಮೂಡಿದವು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ರೇಖಾ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ, ಕಾರ್ಯದರ್ಶಿಗಳಾದ ಶ್ರೀಮತಿ ವರ್ಷ ವಿ. ಜೈನ್, ಅಧ್ಯಕ್ಷರಾದ ಶ್ರೀ ವಿಜಯ ಜೈನ್, ಮತ್ತು ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಜ್ರೆಶ್ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಹಕಾರ ನೀಡಿದರು.
ಕಾಲೇಜಿನ ಎಲ್ಲಾ ಭೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಮತ್ತು ಪೋಷಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.