ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ಮೊಹಮ್ಮದ್ ಫೈಜಲ್ ಅನರ್ಹ
ದೆಹಲಿ: ಅಪರಾಧ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮೊಹಮ್ಮದ್ ಫೈಜಲ್ ಲಕ್ಷದ್ವೀಪದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
2009 ರಲ್ಲಿ ದಾಖಲಾದ ಕೊಲೆ ಯತ್ನ ಪ್ರಕರಣದಲ್ಲಿ ಸಂಸದ ಮೊಹಮ್ಮದ್ ಫೈಜಲ್ ಮತ್ತು ಇತರ ಮೂವರಿಗೆ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಫೈಜಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಲೋಕಸಭೆಯ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಈ ವಿಚಾರ ತಿಳಿಸಿದೆ.