ದಾವಣಗೆರೆ

MP: ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಿಢೀರ್ ಭೇಟಿ ವಾರ್ಡ್‌ಗಳ ಪರಿಶೀಲನೆ ನಡೆಸಿ ರೋಗಿಗಳೊಂದಿಗೆ ಮಾತುಕತೆ – ಆಸ್ಪತ್ರೆಯ ವ್ಯವಸ್ಥೆಗಳ ಮಾಹಿತಿ ಪಡೆದ ಸಂಸದೆ

Share
Share

ದಾವಣಗೆರೆ; (MP) ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಇಂದು ದಾವಣಗೆರೆಯ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವಾರ್ಡ್‌ಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗೆ ಭೇಟಿ ನೀಡಿದ ಸಂಸದರು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಮಾಹಿತಿ ಪಡೆದರು. ಜೊತೆಗೆ ರೋಗಿಗಳ ಸಮಸ್ಯೆಗಳು ಹಾಗೂ ಆಸ್ಪತ್ರೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ನೇರವಾಗಿ ಆಲಿಸಿದರು.

ಆಸ್ಪತ್ರೆಯ ಸ್ವಚ್ಛತೆ, ಔಷಧಿಗಳ ಲಭ್ಯತೆ, ವೈದ್ಯರು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನವೀಯ ಸೇವೆ ದೊರಕುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಆಸ್ಪತ್ರೆಯ ಆಡಳಿತ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.ಆಸ್ಪತ್ರೆಯ ಕ್ಯಾಂಟೀನ್ ಗೆ ಭೇಟಿ ನೀಡಿ ಸ್ವಚ್ಚತೆ ಪರಿಶೀಲನೆ ನಡೆಸಿದರು.

ಸಂಸದರ ದಿಢೀರ್ ಭೇಟಿ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಚಟುವಟಿಕೆ ಕಂಡುಬಂದಿತು. ರೋಗಿಗಳು ಹಾಗೂ ಸಾರ್ವಜನಿಕರು ಸಂಸದರ ಈ ಪರಿಶೀಲನಾ ಕ್ರಮವನ್ನು ಸ್ವಾಗತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

ದಾವಣಗೆರೆ

Jhalmuri: ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮೋದಿಯವರ ಜನಸಾಮಾನ್ಯರ ಜೊತೆಯ ಬಾಂಧವ್ಯ: ಒಂದು ವಿಶ್ಲೇಷಣೆ

​ಕೋಲ್ಕತ್ತಾ: (Jhalmuri) ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ...

Related Articles
ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ...

ದಾವಣಗೆರೆ

Mobile: ವಿದ್ಯಾರ್ಥಿಗಳಲ್ಲಿ ಛಲ ಮತ್ತು ಏಕಾಗ್ರತೆ ಬರಲು ಮೊಬೈಲ್ ಗೀಳಿನಿಂದ ದೂರವಿರಬೇಕು: ದಾ.ವಿ.ವಿ ಉಪಕುಲಪತಿ ಡಾ. ಬಿ.ಇ. ರಂಗಸ್ವಾಮಿ

ದಾವಣಗೆರೆ(Mobile): ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದಾಗ ಮಾತ್ರ ಅವರ ಸಾಧನೆಗೆ ಅಗತ್ಯವಾದ ಛಲ ಮತ್ತು ಏಕಾಗ್ರತೆ...