ಸಂಸದರ ನೂತನ ಜನ ಸಂಪರ್ಕ ಕಚೇರಿ ಉದ್ಘಾಟಿಸಿದ ಡಾ ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ನೂತನ ಜನ ಸಂಪರ್ಕ ಕಚೇರಿಯನ್ನು ಉದ್ಘಾಟಿಸಿದರು.
ಇಂದು ಬೆಳಗ್ಗೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯ 31 ಮತ್ತು 32ನೇ ಕೊಠಡಿಯಲ್ಲಿ ಜನ ಸಂಪರ್ಕ ಕಚೇರಿಗೆ ಪೂಜಾ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ನಂತರ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಪ್ರಭಾ ಮಲ್ಲಿಕಾರ್ಜುನ್ ಅವರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜನ ಸಂಪರ್ಕ ಕಚೇರಿಯನ್ನು ಆರಂಭಿಸಲಾಗಿದ್ದು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಕಚೇರಿಗೆ ತಲುಪಿಸುವ ಮೂಲಕ ಪರಿಹಾರ ಕಂಡುಕೊಳ್ಳಲು ಮನವಿ ಮಾಡಿದರು.
ಈಗಾಗಲೇ ದಾವಣಗೆರೆ ಜಿಲ್ಲೆಯ ಮತ್ತು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದ್ದು ಬಹು ವರ್ಷಗಳ ಕಾಲ ಬಗೆಹರಿಯದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.