ಮೂಡಿಗೆರೆ ಶಾಸಕ ಕುಮಾರ ಸ್ವಾಮಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ
ಚಿಕ್ಕಮಗಳೂರು: ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೇಕಾಗಿ ವಿನಂತಿ ಎಂದು ಅವರು ರಾಜೀನಾಮೆ ಪತ್ರದಲ್ಲಿ ಕೋರಿದ್ದಾರೆ.
ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಅವರ ಪಟಾಲಂ ಷಡ್ಯಂತ್ರವೇ ಕಾರಣ ಎಂದು ಕುಮಾರಸ್ವಾಮಿ ದೂರಿದ್ದಾರೆ.
ಮತದಾರರು ಮತ್ತು ಬೆಂಬಲಿಗರೊಮದಿಗೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ ಎಂದವರು ಹೇಳಿದ್ದಾರೆ.