ಮುಖ್ಯಮಂತ್ರಿಗಳಿಗೆ ವೀರಶೈವ ಮಹಾಸಭಾದಿಂದ ಅಭಿನಂದನೆ
ದಾವಣಗೆರೆ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದವರು ಇಂದು ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಇಂದು ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿದ ಅಖಿಲ ಭಾರತ ವೀರಶೈವ ಮಹಾಸಭಾದವರು ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ, ಸಚ್ಚಿದಾನಂದ, ರೇಣುಕ ಪ್ರಸನ್ನ, ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಧುರಾ ಅಶೋಕ್, ರಾಜಲಕ್ಷ್ಮೀ, ದಿನೇಶ್ ಕೆ.ಶೆಟ್ಟಿ ಮತ್ತಿತರರಿದ್ದರು.