ಮುಂಗಾರು ಮಳೆಯ ಪ್ರಭಾವ:ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಭಾವ ಮುಂದುವರಿದಿದ್ದು,
ಇಂದು ಸಹ ಮಳೆಯಾಗುವ ಸಾಧ್ಯತೆ ಇಂದು ಭಾರತೀಯ ಹಾವಮಾನ ಇಲಾಖೆ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮಲೆನಾಡು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕೆಲ ದಿನಗಳಿಂದ ಭಾರಿ ಮಳೆ ಸುರಿದಿದೆ ಎಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಶಿವಮೊಗ್ಗ, ರಾಮನಗರ,ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಜಿಲ್ಲೆಗಳಲ್ಲಿ ಮಳೆ ಪ್ರಮಾಣದ ತಿರ್ವವಾಗಲಿದೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ ಇಂದು ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ