ಮೂರು ಮಹಾನಗರಪಾಲಿಕೆಯ ಫಲಿತಾಂಶದಿಂದ ಜನತೆ ಬಿಜೆಪಿ ಸರ್ಕಾರದ ಜೊತೆ ಇರುವುದು ಸಾಬೀತಾಗಿದೆ : ಬಸವರಾಜ್ ಬೊಮ್ಮಾಯಿ
ಬೆಂಗಳೂರು: ರಾಜ್ಯದ ಮೂರು ಮಹಾನಗರಪಾಲಿಕೆಗಳು ಸೇರಿದಂತೆ ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಜನಬೆಂಬಲ ಇರುವುದು ಸಾಬೀತುಪಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ರಾಜ್ಯ ಪೊಲೀಸ್ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ನಡೆದ ಐಪಿಎಸ್ ಅಧಿಕಾರಿಗಳ ಸಮ್ಮೇಳನದ ಬಳಿಕ. ಅವರು ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದರು.
ಬೆಳಗಾವಿ ಮಾನವ ಪಾಲಿಕೆಯಲ್ಲಿ ಬಿಜೆಪಿ ಸ್ವಚ್ಛ ಬಹುಮತ ಪಡೆದಿದೆ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಜೊತೆ ಬೆಳಗಾವಿಯ ಜನತೆ ಇರುವುದು ಸಾಬೀತಾಗಿದೆ
ಕಲ್ಬುರ್ಗಿ ಹಾಗೂ ಧಾರವಾಡ ಮಾಲಿಕೆಗಳು ನಮ್ಮದೇ ಪಕ್ಷ ಅಧಿಕಾರ ಹಿಡಿಯಲಿದೆ ಎಂದರು.
ಪಕ್ಷದ ಸ್ಥಳೀಯ ಘಟಕಗಳ ಅಧ್ಯಕ್ಷರು ಹಿರಿಯ ಮುಖಂಡರ ಹಾಗೂ ಕಾರ್ಯಕರ್ತರ ಶ್ರಮದಿಂದ ಹೆಚ್ಚು ಸ್ಥಾನಗಳು ದೊರೆತಿವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೆಚ್ಚು ಶ್ರಮ ಹಾಕಿದ್ದರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇವರುಗಳ ಮಾರ್ಗದರ್ಶನದಲ್ಲಿ ಈ ಚುನಾವಣೆಯಲ್ಲಿ ನಾವು ಜಯಗಳಿಸಿದ್ದಾರೆ ಎಂದುರು