ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ-ಯಡಿಯೂರಪ್ಪ

ಯಡಿಯೂರಪ್ಪ

ಬೆಂಗಳೂರು: ತಮ್ಮ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಿಂದ ಮನದುಂಬಿ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ. ಕರ್ನಾಟಕದ ಯಾವುದೇ ಗಣ್ಯ ವ್ಯಕ್ತಿಗಳ ಹೆಸರು ಇಡುವುದು ಸೂಕ್ತ ಎಂದು ವಿನಯದಿಂದ ಮನವಿ ಮಾಡುತ್ತೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ.
ಈ ಹಿಂದೆ ಪ್ರಸ್ತಾವ ಬಂದಾಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೆಸರು ಇಡುವುದು ಬೇಡ, ಬೇರೆ ಯಾವುದೇ ಗಣ್ಯರ ಹೆಸರನ್ನಿಡುವಂತೆ ಸೂಚಿಸಿದ್ದರು.

Leave a Reply

Your email address will not be published. Required fields are marked *

error: Content is protected !!