mysore; ಮೈಸೂರಿನಲ್ಲಿ ಜಂಬೂಸವಾರಿಗೆ ಕ್ಷಣಗಣನೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮೈಸೂರು mysore ಸಂಪೂರ್ಣ ಸಜ್ಜಾಗಿದ್ದು, ಈ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಕಾತರದಿಂದ ಕಾಯುತ್ತಿದ್ದಾರೆ.
ಇಂದು ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿರುವ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದು, ಸಂಜೆ 4.40 ರಿಂದ 5 ಗಂಟೆಯೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ವಿಜಯದಶಮಿ ದಿನ ನಡೆಯಲಿರುವ ಮೆರವಣಿಗೆಗೆ ಗಜಪಡೆ ಸಂಪೂರ್ಣವಾಗಿ ಸಿದ್ಧವಾಗಿದ್ದು, ನಾಲ್ಕನೇ ಬಾರಿ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಈಗಾಗಲೇ ಮರದ ಅಂಬಾರಿ, ಕುಶಾಲುತೋಪು ತಾಲೀಮು, ಮರಳು ಮೂಟೆ ತಾಲೀಮು, ಜಂಬೂಸವಾರಿ ಪುಷ್ಪಾರ್ಚನೆ ರಿಹರ್ಸಲ್ ಸೇರಿದಂತೆ ಎಲ್ಲಾ ಬಗೆಯ ತಾಲೀಮುಗಳನ್ನು ಮಾಡಲಾಗಿದೆ. ಗಜಪಡೆಯ ಎಲ್ಲಾ ಆನೆಗಳು ಆರೋಗ್ಯದಿಂದ ಇವೆ. ಭೀಮ, ಧನಂಜಯ ಪಟ್ಟದ ಆನೆಯಾಗಿ ಅರಮನೆ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿವೆ.
ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲೆಡೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
dandiya dance; ದಾಂಡಿಯಾ ಆಡಿದ ಶಾಮನೂರು ಶಿವಶಂಕರಪ್ಪ, ಹೆಜ್ಜೆ ಹಾಕಿದ ಯುವತಿಯರು
ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಆಗಮಿಸಿರುವ ಪ್ರವಾಸಿಗರು ಈಗಾಗಲೇ ಮೈಸೂರಿನಲ್ಲಿ ಬೀಡುಬಿಟ್ಟಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ. ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಫ್ ಸೌರಭ್ ಕುಮಾರ್ ತಿಳಿಸಿದ್ದಾರೆ.