ಮೈಸೂರು ರಸ್ತೆಯಿಂದ ಕೆಂಗೇರಿಗೆ ಮೆಟ್ರೋ ರೈಲು ಲೋಕಾರ್ಪಣೆ
ಬೆಂಗಳೂರು: ಬೆಂಗಳೂರು ನಗರದ ಸಂಚಾರಿ ದಟ್ಟಣೆ ಹಾಗೂ ಸಮಯ ಉಳಿತಾಯ ಕ್ಕೆ ಜನರಿಗೆ
ಸಂತೋಷ ಸುದ್ದಿ ಬೆಂಗಳೂರು ನಗರದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ ಮೀ ಮೆಟ್ರೋ ನೇರಳೆ ಮಾರ್ಗವನ್ನು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಹಸಿರು ನಿಶಾನೆ ತೋರುವ ಮೂಲಕ ಲೋಕಾರ್ಪಣೆ ಮಾಡಿದರು
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ, ಕೆ.ಗೋಪಾಲಯ್ಯ, ಮುನಿರತ್ನ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಮುನಿರಾಜುಗೌಡ, ಲೆಹರ್ ಸಿಂಗ್ ಸಿರೋಯಾ, ಹಿರಿಯ ಅಧಿಕಾರಿಗಳು ಮತ್ತಿತರ ಅಧಿಕಾರಿಗಳು ಹಾಜರಿದ್ದರು