ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಮನೆಗೆ ಭೇಟಿ ನೀಡಿದ ಡಾ. ಪ್ರಭಾ ಮಲ್ಲಿಕಾರ್ಜುನ್.
ಪೌರಕಾರ್ಮಿಕರ ಬಡಾವಣೆಯಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ, ಪೌರಕಾರ್ಮಿಕರಿಗೆ ಆರೋಗ್ಯದ ಬಗ್ಗೆ ಗಮನಹರಿಸಲು ತಿಳಿಸಿ ನಂತರ ಪೌರಕಾರ್ಮಿಕರ ಮನೆಗೆ ಭೇಟಿ ನೀಡಿದರು ನೂತನ ಬಡಾವಣೆಯಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೀನಾಕ್ಷಿ ಜಗದೀಶ್, ಪಾಲಿಕೆ ಸದಸ್ಯರಾದ ಜಿ.ಡಿ ಪ್ರಕಾಶ್ ಹಾಗೂ ಪಕ್ಷದ ಯುವ ಮುಖಂಡರಾದ ಸಾಗರ್ ಎಲ್.ಎಂ.ಹೆಚ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.