ಕಾಂಗ್ರೆಸ್‌ಗೆ ಕೈಕೊಟ್ಟ ಅಲ್ಪಸಂಖ್ಯಾತ ಮುಖಂಡ ನಾಸೀರ್ ಅಹ್ಮದ್
ದಾವಣಗೆರೆ : ಕಾಂಗ್ರೆಸ್ ಪಕ್ಷದ ಇತ್ತೀಚಿನ ಬದಲಾವಣೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅಲ್ಪಸಂಖ್ಯಾತ ಮುಖಂಡ ನಾಸೀರ್ ಅಹ್ಮದ್ ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, 32 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ. ರಾಜೀವ್ ಗಾಂಧಿ ಅವರು ದಾವಣಗೆರೆಗೆ ಆಗಮಿಸಿದ್ದಾಗ ಶ್ರೀಮತಿ ನಾಗಮ್ಮ ಕೇಶವಮೂರ್ತಿ ಅವರು ನಮ್ಮನ್ನು ಕಾಂಗ್ರೆಸ್‌ಗೆ ಕರೆತಂದರು. ಕಳೆದ ದಿನ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿ ರಾಜೀನಾಮೆ ಸಲ್ಲಿಸಿದ್ದೇನೆ. ನನಗೆ ಪಕ್ಷ ಸಾಕಷ್ಟು ಸ್ಥಾನಮಾನ ನೀಡಿತು. ಇಂದಿನ ದಿನಮಾನಗಳನ್ನು ಗಮನಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.
ರಾಜಕೀಯ ಪಕ್ಷಕ್ಕೆ ಸೇರುವ ಬದಲು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಪ್ಲಾನಿಂಗ್ ಕಮಿಷನ್, ಮೈನಾರಿಟಿ ಕಮಿಷನ್, ಹ್ಯಾಂಡಿಕ್ರಾಪ್ಟ್ ಬೋರ್ಡ್, ರೈಲ್ವೆ ಬೋರ್ಡ್ ಸದಸ್ಯ ಹೀಗೆ ಪಕ್ಷ ಸಾಕಷ್ಟು ಸ್ಥಾನಮಾನಗಳನ್ನು ನೀಡಿತ್ತು. ಆದರೆ, ಇಂದಿನ ದಿನಮಾನಗಳಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತಿರುವ ನಿರ್ಧಾರ ಹಾಗೂ ನಡೆಯುತ್ತಿರುವ ಡೆವಲಪ್‌ಮೆಂಟ್ ಗಮನಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.