ನಟ ಅಮಿತಾಬ್ ಬಚ್ಚನ್ ಅವರಿಂದ ₹ 5 ಕೋಟಿ ಕೊಟ್ಟು ಖರೀದಿಸಿದ್ದ ಐಶಾರಾಮಿ ಕಾರುಗಳನ್ನ ವಶಕ್ಕೆ ಪಡೆದ ಸಾರಿಗೆ ಇಲಾಖೆ

ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರು ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಂದ 5 ಕೋಟಿ ರು., ಕೊಟ್ಟು ಖರೀದಿಸಿದ್ದ ಐಶಾರಾಮಿ ಕಾರನ್ನು ಸಾರಿಗೆ ಇಲಾಖೆ ವಶಪಡಿಸಿಕೊಂಡಿದೆ.!
ಉದ್ಯಮಿ ಬಾಬು ಎಂಬುವವರು ಕಳೆದ ಎರಡು ವರ್ಷಗಳ ಹಿಂದೆ ಕಾರನ್ನು ಖರೀದಿಸಿದ್ದರು. ಆದರೆ, 2 ವರ್ಷವಾದರೂ ಇವರ ಹೆಸರಿಗೆ ನೋಂದಣಿ ಮಾಡಿಕೊಳ್ಳದ ಕಾರಣ ಇಂದು ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ.
ಇದೇ ತರಹ ತೆರಿಗೆ ಪಾವತಿಸದೇ, ಮಾಲಿಕತ್ವ ಬದಲಾಯಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್ ವಾಹನ ನಿರೀಕ್ಷಕರಾದ ಸುಧಾಕರ್, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್, ರಂಜಿತ್, ರಾಜೇಶ್ ಮತ್ತು ರಾಜ್ ಕುಮಾರ್ ಅವರನ್ನ ಒಳಗೊಂಡ ತಂಡ ಇಂದು ಕಾರ್ಯಾಚರಣೆ ನಡೆಸಿದೆ.