ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಇಪಿಎಫ್ -95 ಆಗ್ರಹ
ದಾವಣಗೆರೆ- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಇಪಿಎಫ್ -95 ಆಗ್ರಹಿಸಿ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಗಿದೆ.
ನಗರ ಇಪಿಎಫ್ ಕಛೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಲು ಇಪಿಎಫ್ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಕನಿಷ್ಟ ಪಿಂಚಣಿ 7500+ತುಟ್ಟಿಭತ್ಯೆ+ವೈದ್ಯಕೀಯ ಸೌಲಭ್ಯ ಹಾಗೂ ವಿಧವೆಯರಿಗೆ ಪೂರ್ಣ ಪಿಂಚಣಿ ವೇತನ ಹಾಗೂ ಪಿಂಚಣಿ ವಂಚಿತರಿಗೆ ಕನಿಷ್ಠ 5000 ರೂ. ಕೊಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎಂ. ಮರುಳಸಿದ್ದಯ್ಯ , ಉಪಾಧ್ಯಕ್ಷ ಗಂಗಾಧರ್, ಸಂಯೋಜಕ ಎಂ. ಶಾಂತಪ್ಪ, ಕಾರ್ಯದರ್ಶಿ ಮಲ್ಲಿಕಾರ್ಜುನ ತಂಗಡಗಿ, ಖಜಾಂಚಿ ಡಿ.ಹೆಚ್. ಶೆಟ್ಟರ್ ಇತರರು ಈ ಸಂದರ್ಭದಲ್ಲಿ ಇದ್ದರು.