ಸರ್ಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ

 

ಉತ್ಕೃಷ್ಟ ಗುಣಮಟ್ಟದ ಶಿಕ್ಷಣವನ್ನು ಅಭಿವೃದ್ಧಿ ಪಡಿಸುವಲ್ಲಿ ಶಿಕ್ಷಣ ನೀತಿಯ ಪಾತ್ರ ಬಹುಮುಖ್ಯ ಎಂದು ಡಾ. ದಿನೆಶ ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕುರಿತು ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಪ್ರಸ್ತುತ ಸ್ಪರ್ಧಾತ್ಮಕ ಕಾಲವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಬೇಕಿದೆ. ಅಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಗೂ ಉನ್ನತ ಮಟ್ಟದ ಶಿಕ್ಷಣ ದೊರಕಬೇಕಿದ್ದು ನಮ್ಮ ಕರ್ನಾಟಕ ಸರ್ಕಾರ ರಾಷ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯ ಮುಕ್ತ ಅವಕಾಶವನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯನ್ನು ತಾವು ಮಾಡಿಕೊಂಡು ತಮ್ಮ ಗೆ ಬೇಕಾದ ಕಾಲೇಜುಗಳಿಗೆ ಪ್ರವೇಶವನ್ನು ಪಡೆಯಬಹುದು ಈ ಹಿಂದಿನ ಶಿಕ್ಷಣ ನೀತಿಯಲ್ಲಿ ಇರುವ ಹಾಗೆ 1ಪದವಿಯನ್ನು 1ಕಾಲೇಜಿನಲ್ಲಿಯೇ ಪಡೆಯಬೇಕೆಂಬ ನೀತಿಯನ್ನು ತೆಗೆದುಹಾಕಿ ವಿದ್ಯಾರ್ಥಿಯ ಆಯ್ಕೆಗೆ ಅನುಗುಣವಾಗಿ ಪದವಿಯ ವಿವಿಧ ಹಂತಗಳಲ್ಲಿ ಕೂಡ ಕಾಲೇಜು ಬದಲಾವಣೆ ಯನ್ನು ಮಾಡಿಕೊಳ್ಳುವ ಮುಕ್ತ ಅವಕಾಶ ದೊರಕಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಾಯಿರಾ ಬಾನು ಫಾರೂಕಿ ಅವರು ಅಧ್ಯಕ್ಷತೆ ವಹಿಸಿದ್ದರು ಐ ಕ್ಯೂ ಎ ಸಿ ಸಂಚಾಲಕರಾದ ಪ್ರೊ ವೀರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು . ಅಧ್ಯಾಪಕರು, ಪೋಷಕರು ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಡಾ ವೀರೇಂದ್ರ ಅವರು ನಿರೂಪಿಸಿದರು ಅತಿಥಿಗಳನ್ನು ವೆಂಕಟೇಶ ಬಾಬು ಅವರು ಸ್ವಾಗತಿಸಿದರು ಮಂಜುನಾಥ ಅವರು ವಂದಿಸಿದರು ಕುಮಾರಿ ಕಾವ್ಯಾ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

error: Content is protected !!