ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ದಾವಣಗೆರೆ : ಕಕ್ಕರಗೊಳ್ಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ. 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು.
ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ. ಮಾತನಾಡಿ ಹೆಣ್ಣು ಮಕ್ಕಳಿಗೆ ಆರೋಗ್ಯಕರ ಸುರಕ್ಷಿತ ವಾತಾವರಣ ಸೃಷ್ಟಿಸುವ ಕುರಿತು ಜಾಗೃತಿ ಮೂಡಿಸೋಣ. ಸಮಾಜದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸೋಣ ಎಂದರು.
ಕಾರ್ಯಕ್ರಮದಲ್ಲಿ ಬಾಪೂಜಿ ಎ.ಎ.ಒ ಕಾಲೇಜಿನ ಡಾ.ಪೂಜಾ. ಎನ್, ಡಾ.ನಂದಿನಿ, ಡಾ.ಪೂರ್ಣಿಮಾ ಹಾಗೂ ಕಕ್ಕಗೋಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯ ಡಾ. ರಮೇಶ್ ಬಿ.ಎ, ಆರೋಗ್ಯ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.