National Legal Service Day; ನಾಳೆ ಕಾನೂನು ಸಾಕ್ಷರತಾ ಅರಿವು ಜಾಥಾ

ದಾವಣಗೆರೆ, ನ.08: ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯ (National Legal Service Day) ಅಂಗವಾಗಿ ಕಾನೂನು ಸಾಕ್ಷರತಾ ಅರಿವು ಜಾಥಾ ನ.9 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರ್.ಎಲ್. ಕಾನೂನು ಮಹಾವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆ, ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

city rounds; ಜನತೆಯ ಸಂಕಷ್ಟ ಆಲಿಸಿದ ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ

ಜಾಥಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್ ಹೆಗಡೆ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ, ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್.ಬಿ ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್.ಎಲ್.ಹೆಚ್, ಆರ್.ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಯತೀಶ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವಾಸಂತಿ ಉಪ್ಪಾರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ, ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ ಬಸವರಾಜ ಗೋಪಾನಾಳ್, ಕಾರ್ಯದರ್ಶಿ ಬಸವರಾಜ್.ಎಸ್, ಸಹ ಕಾರ್ಯದರ್ಶಿ ಎ.ಎಸ್ ಮಂಜುನಾಥ್ ಭಾಗವಹಿಸುವರು. ಪ್ಲಾಸ್ಟಿಕ್ ಮುಕ್ತ ಪರಿಸರ, ಪೋಕ್ಸೋ ಕಾನೂನು ಅರಿವು, ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು, ಬಾಲ ಕಾರ್ಮಿಕ ಪದ್ದತಿ ವಿರೋಧ, ರಾಷ್ಟ್ರೀಯ ಸಂಚಾರಿ ನಿಯಮ ಉಲ್ಲಂಘನೆ ಕುರಿತು ಜಾಗೃತಿ ಕುರಿತು ಎಲ್ಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ ಜಾಥವನ್ನು ಜಾಗೃತಿ ಮೂಡಿಸಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!