National Pulse Polio : ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ, ಪೂರ್ವ ಸಿದ್ಧತಾ ಸಭೆಯಲ್ಲಿ ಡಿಸಿ ಹೇಳಿಕೆ ಡಿ.21 ರಿಂದ 24 ರವರೆಗೆ : 1.40 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 32768;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯಬಾರದು.
ಜಿ.ಪಂ. ಸಿಇಓ ಗಿತ್ತೆ ಮಾಧವ ವಿಠಲ ರಾವ್ ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಸಹ ಲಸಿಕೆಯಿಂದ ಹೊರಗುಳಿಯಬಾರದು. ವಿಶೇಷವಾಗಿ ಗ್ರಾಮೀಣ ಮತ್ತು ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗಮನ ಹರಿಸಿ ಅವರಿಗೂ ಕೂಡ ಲಸಿಕೆ ನೀಡಬೇಕು. ಅದರಲ್ಲೂ ಚನ್ನಗಿರಿ ವಲಯದಲ್ಲಿ ಹೆಚ್ಚಾಗಿ ಅರಣ್ಯ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಡಿಕೆ ಕೆಲಸಕ್ಕೆ ತೆರಳುವ ಕಾರ್ಮಿಕರು ತಮ್ಮ ಮಕ್ಕಳನ್ನು ಕೆಲಸದ ಸ್ಥಳಗಳಲ್ಲಿ ಕಾಣ ಸಿಗುತ್ತಾರೆ. ಅವರನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.
—
