National Youth Congress : ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೈಯದ್ ಖಾಲಿದ್ ಅಹ್ಮದ್ ಪುನರಾಯ್ಕೆ

Re-election of Syed Khalid Ahmed as Secretary of Indian National Youth Congress
ದಾವಣಗೆರೆ: National Youth Congress  ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಅವರು ಪುನರಾಯ್ಕೆಯಾಗಿದ್ದಾರೆ.

ದೇಶಾದ್ಯಂತ ಒಟ್ಟು 62 ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳನ್ನು ನಿಯುಕ್ತಿಗೊಳಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಅತ್ಯುತ್ತಮವಾಗಿ ಸೈಯದ್ ಖಾಲಿದ್ ಅಹ್ಮದ್ ಅವರು ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಪುನಾರಾಯ್ಕೆ ಮಾಡಲಾಗಿದೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಸೈಯದ್ ಖಾಲಿದ್ ಅಹ್ಮದ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲ ಅವರ ಪುತ್ರ. ಕಾಂಗ್ರೆಸ್ ಯುವ ಘಟಕ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ಸೈಯದ್ ಖಾಲಿದ್ ಅಹ್ಮದ್ ಅವರು ಸಂಘಟನಾ ಚತುರರು.

ತೆಲಂಗಾಣ, ಬಿಹಾರ, ಮಹಾರಾಷ್ಟ್ರ. ಕರ್ನಾಟಕ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತಮಗೆ ವಹಿಸಿದ ಜವಾಬ್ದಾರಿ ನಿಭಾಯಿಸಿ ರಾಜ್ಯ ಮತ್ತು ರಾಷ್ಟ್ರ ನಾಯಕರ ಸೆಳೆದವರು. ತೆಲಂಗಾಣ ಯುವ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಸೈಯದ್ ಖಾಲಿದ್ ಅಹ್ಮದ್ ಬಿಡುವಿಲ್ಲದೇ ಕಾಂಗ್ರೆಸ್ ಸಭೆ, ಸಮಾರಂಭ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂತೋಷ ತಂದಿದೆ:

ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪುನರಾಯ್ಕೆ ಮಾಡಿರುವುದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷವು ವಹಿಸಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಕ್ಷದ ಆದೇಶ ಪಾಲಿಸುವೆ. ಬೇರೆ ಬೇರೆ ರಾಜ್ಯಗಳಲ್ಲಿಯೂ ಚುನಾವಣೆ ವೇಳೆ ಕೆಲಸ ಮಾಡಲು ಅನುವು ಮಾಡಿಕೊಟ್ಟಿದೆ. ಪಕ್ಷವು ಕೆಲಸ ಗುರುತಿಸಿ ಮುಂದುವರಿಸಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ. ಪಕ್ಷದ ನಾಯಕರು, ಪಕ್ಷ ಸಂಘಟನೆಗೆ ಹಗಲಿರುಳು ಶ್ರಮಿಸುತ್ತೇನೆ. ಯುವಕರಲ್ಲಿ ಪಕ್ಷದ ತತ್ವ, ಸಿದ್ಧಾಂತ, ದೇಶಕ್ಕೆ ನೀಡಿರುವ ಕೊಡುಗೆ ತಿಳಿಸುವ ಕೆಲಸ ಮುಂದುವರಿಸುತ್ತೇನೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ತಿಳಿಸಿದ್ದಾರೆ.

error: Content is protected !!