ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ: ಡಿಸಿ
ದಾವಣಗೆರೆ: ಜಿಲ್ಲೆಯಲ್ಲಿ ೦೩ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರಕಾರಿ ಮತ್ತು ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು ೩ ಸಾವಿರದಷ್ಟು ಬೆಡ್ ವ್ಯವಸ್ಥೆ ಮಾಡಿಕೊಂಡಿದ್ದು, ಖಾಸಗಿ ಮೆಡಿಕಲ್ ಕಾಲೇಜುಗಳು ಶೇ.೭೫ ರಷ್ಟು ಹಾಗೂ ಖಾಸಗಿ ಆಸ್ಪತ್ರೆಗಳು ಶೇ. ೫೦ ರಷ್ಟು ಬೆಡ್‌ಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಒದಗಿಸುವಂತೆ ಈಗಾಗಲೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಕೆ, ಪ್ರಯೋಗಾಲಯಗಳು, ವೆಂಟಿಲೇಟರ್ ಮುಂತಾದ ಉಪಕರಣಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ಎಲ್ಲ ಆಕ್ಸಿಜನ್ ಪ್ಲಾಂಟ್ ನಿರ್ವಹಣೆಗಾಗಿ ೧೧ ಜನ ನೇಮಿಸಿಕೊಳ್ಳುವ ಪ್ರಕ್ರಿಯೆ ಅಂತಿಮಗೊಂಡಿದೆ ಎಂದು ಡಿಸಿ ಹೇಳಿದರು.