ರಾಜ್ಯ ಸುದ್ದಿ

ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು ಮಾಡಲಾಗುವುದು – ಸಿಎಂ ಸಿದ್ದರಾಮಯ್ಯ

ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು ಮಾಡಲಾಗುವುದು - ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಬರುವ  ಶೈಕ್ಷಣಿಕ ವರ್ಷದಿಂದ ಕರ್ನಾಟಕ ರಾಜ್ಯದಲ್ಲಿ NEP ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಇಂದು ನಡೆದ ಕೆಪಿಸಿಸಿ ಕಚೇರಿಯಲ್ಲಿ,  ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಹೇಳಿದರು.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ National Education Policy ಅನ್ನು ಬರುವ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದು ಮಾಡಲಾಗುವುದು ಎಂದು ಹೇಳಿದರು. ಪ್ರಮುಖವಾದ ಕೆಲವು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಾಗಿದೆ. ಪ್ರಸಕ್ತ ಸಾಲಿನಲ್ಲಿ ಇದಕ್ಕಾಗಿ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಈ ಮಧ್ಯದಲ್ಲಿತೊಂದರೆ ಆಗಬಾರದು ಎಂಬ ಕಾರಣದಿಂದ ಈ ಸಾಲಿನಲ್ಲಿ ಹಾಗೆಯೇ ಮುಂದುವರಿಯಲಿದೆ.

ಪ್ಲಾಸ್ಟಿಕ್ ಕವರ್‌ ಬದಲು, ಬಟ್ಟೆ ಹಾಗೂ ಮರುಬಳಕೆಯ ಪೇಪರ್ ನಿರ್ಮಿತ ಚೀಲ ಬಳಸಲು ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ ಮನವಿ

National Educational Policy ರದ್ದತಿಗಾಗಿ ಒಕ್ಕೊರಲಿನಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರುಗಳು ಭಾರಿ ವಿರೋಧವಿತ್ತು. ಬಿಜೆಪಿ ದೇಶದಲ್ಲಿ ಎಲ್ಲಾ ರಾಜ್ಯದಲ್ಲಿ NEP ಜಾರಿಗೊಳಿಸದೆ ಕೇವಲ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ರಾಜ್ಯ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

Most Popular

To Top