Pallakki; ನೂತನ ಪಲ್ಲಕ್ಕಿ ಬಸ್ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ
ಬೆಂಗಳೂರು, ಅ.07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಆಯೋಜಿಸಿರುವ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಪಲ್ಲಕ್ಕಿ ((pallakki)) ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿದರು.
40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
drought; 4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಮುನಿಯಪ್ಪ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ದಿನೇಶ್ ಗುಂಡೂರಾವ್ ಸಾರಿಗೆ ಅಧಿಕಾರಿಗಳು ಹಾಜರಿದ್ದರು. ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ನೂತನ ಬಸ್ ಗಳಿಗೆ ಚಾಲನೆ ಕೊಟ್ಟು ಮೈಸೂರಿನತ್ತ ಪಯಣಿಸಿದರು.