ಬ್ರೇಕಿಂಗ್ : ಜೂನ್ 21 ರ ನಂತರವೂ ದಾವಣಗೆರೆ ಜಿಲ್ಲೆ ಸೇರಿ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ : ನಾಳೆ ಜಿಲ್ಲಾಧಿಕಾರಿಗಳ ಮಹತ್ವದ ಸಭೆ

Breaking: ದಾವಣಗೆರೆ : ರಾಜ್ಯದಲ್ಲಿ ಶೇ 5% ಕಡಿಮೆ ಪಾಸಿಟಿವಿಟಿ ರೇಟ್ ಇರೋ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಸಂಜೆ  5 ಗಂಟೆ ವರೆಗೂ ಓಪನ್..
5 %ಪಾಸಿಟಿವಿಟಿ ರೇಟ್ ಜಾಸ್ತಿ ಇರೋ ಜಿಲ್ಲೆ ಗಳಲ್ಲಿ ಈಗ ಇರೋ ರೂಲ್ಸ್ ಕಂಟಿನ್ಯೂ ಇರುತ್ತೆ..
Bus ಮತ್ತು ಮೆಟ್ರೊ ರೈಲು  ಶೇಕಡಾ 50 % ತೆರೆಯಲು ಅವಕಾಶ ಇರುತ್ತದೆ.. ಪಬ್ಸ್ ಓಪನ್ ಇಲ್ಲಾ.. ಎಂದು ಸಿ ಎಂ ಯಡಿಯೂರಪ್ಪ ಹೇಳಿದ್ದಾರೆ.

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

• ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

• ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುಮತಿ ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

Leave a Reply

Your email address will not be published. Required fields are marked *

error: Content is protected !!