Rahul Gandhi No Entry UP: ರಾಹುಲ್ ಗಾಂಧಿ ಟೀಂ ಉತ್ತರ ಪ್ರದೇಶ ಭೇಟಿಗೆ ಮನವಿ | ನೋ ಎಂಟ್ರಿ ಎಂದ ಯುಪಿ ಸಿಎಂ ಯೋಗಿ ಆದಿತ್ಯನಾಥ್

IMG-20211006-WA0006

ಲಕ್ನೋ : ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಲು ನಿರ್ಧರಿಸಿತ್ತು .

ಆದರೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿ ಭೇಟಿಗೆ ಅವಕಾಶವಿಲ್ಲ ಎಂದಿದೆ .

ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು , ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 144 ಸೆಕ್ಷನ್ ಜಾರಿ ಮಾಡಿದೆ . ಇದಲ್ಲದೆ ಕಾಂಗ್ರೆಸ್ ಪಕ್ಷ , ಬಿಜೆಪಿ ನೇತೃತ್ವದ ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ . ಇಂದು ರಾಹುಲ್ ಸಹಿತ ಕಾಂಗ್ರೆಸ್ ನಿಯೋಗ ಭೇಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿದ್ದರು . ಆದರೆ ಉತ್ತರ ಪ್ರದೇಶ ಸರ್ಕಾರ ಅವಕಾಶ ನಿರಾಕರಿಸಿದೆ .

Leave a Reply

Your email address will not be published. Required fields are marked *

error: Content is protected !!