ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮಕ್ಕೆ ಸೂಚನೆ

Notice for disciplinary action against officers and staff who do not arrive on time

ಬೆಂಗಳೂರು: ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ, ನಿರ್ಲಕ್ಷ್ಯ ವಹಿಸುವ ಅಧಿಕಾರಿ-ಸಿಬ್ಬಂದಿಗಳಿಗೆ ನೋಟೀಸ್ ನೀಡಿ, ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶ್ರೀವತ್ಸ ಕೃಷ್ಣ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿ, ಸುತ್ತೋಲೆ ಹೊರಡಿಸಿದ್ದಾರೆ.

ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದ ನಿರ್ದೇಶಗಳನ್ನು ಸರಿಯಾಗಿ ಪಾಲಿಸದೇ ಇರುವುದು, ಹಾಜರಾತಿ ವರದಿಗಳನ್ನು ಇಲಾಖೆಗಳು ಸರಿಯಾಗಿ ಸಲ್ಲಿಸದೇ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ.
ಬಹುತೇಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಚೇರಿ ಸಮಯ ಪಾಲನೆ ಮಾಡದೇ, ಹಾಜರಾತಿಯಲ್ಲಿ ಈಗಲೂ ನ್ಯೂನತೆ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಆಯಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಯು ಸಕ್ಷಮ ಪ್ರಾಧಿಕಾರದ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಜವಾಬ್ದಾರಿಯಾಗಿರುತ್ತದೆ ಎಂದವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!