ಸಹಾಯಕ ಕೃಷಿ ಅಧಿಕಾರಿಗಳ 300 ಹುದ್ದೆಗಳ ಭರ್ತಿಗೆ ಸೂಚನೆ

ದಾವಣಗೆರೆ: ಸಹಾಯಕ ಕೃಷಿ ಅಧಿಕಾರಿಗಳ 300 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರ ಕೃಷಿ ಇಲಾಖೆ ಆಯುಕ್ತರಿಗೆ ಸೂಚಿಸಿದೆ.
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಮೇ.13ರ, 2022ರಂದು ಸಹಮತಿ ನೀಡಿದೆ. ಅದರಂತೆ ಸಹಾಯಕ ಕೃಷಿ ಅಧಿಕಾರಿಗಳ 300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ) ನಿಯಮಗಳು 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪ್ರಕಾಶ್ ರೋಡ್ರಿಗಸ್ ಮೇ.18ರ 2022ರಂದು ಪತ್ರ ಬರೆದಿದ್ದಾರೆ.