ಗುಣಮಟ್ಟದ ಕಾಮಗಾರಿಗೆ ಸೂಚನೆ-ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಲೋಕಸಭಾ ಸಂಸದರಾದ ಜಿ.ಎಂ. ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ದಾವಣಗೆರೆ, ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಪ್ರಗತಿ ಕಾಣುತ್ತಿಲ್ಲ, . ಏಕೆ ಎಂದು ಅಧಿಕಾರಿಗಳನ್ನು ಕೇಳಿದರು, ದಾವಣಗೆರೆ ಮತ್ತು ಜಗಳೂರು ತಾಲೂಕಿನಲ್ಲಿ ಬಹುತೇಕ ಕೆರೆಗಳು ತುಂಬಿವೆ, ಕಾರ್ಮಿಕ ವಲಯದಿಂದ ಬೇಡಿಕೆ ಕಡಿಮೆ ಇದೆ ಹಾಗಾಗಿ ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಸಾಲಿನಂತೆ ಹತ್ತು ಲಕ್ಷ ಮಾನವ ದಿನ ಸೃಜಿಸುವ ಗುರಿ ಇದೆ. ಮುಂದಿನ ವರ್ಷಗಳಲ್ಲಿ ಇದೇ ಗುರಿ ಮುಂದುವರೆಸಲಾಗುವುದು ಎಂದು ಸಿಇಒ ಡಾ. ಚನ್ನಪ್ಪ ತಿಳಿಸಿದರು.
ಸಮಿತಿಯ ಎಸ್. ಎಸ್. ಮಂಜುನಾಥ್, ನರೇಗಾ ಕಾಮಗಾರಿಯಡಿ ಬಾಕ್ಸ್ ಚರಂಡಿ ಗೆ ಒತ್ತು ನೀಡಲಾಗುತ್ತಿದೆ. ಕೆಲವು ಕಾಮಗಾರಿ ಕಾರ್ಯಾದೇಶ ತಿರಸ್ಕರಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನವನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳದೇ ಕಾಮಗಾರಿಯಲ್ಲಿ ಗುಣಮಟ್ವನ್ನು ಕಾಯ್ದುಕೊಂಡು ಮುಂದುವರೆಯುವಂತೆ ಸೂಚಿಸಿದರು.
ಮಹಾತ್ಮ ಗಾಂಧಿ ರಾಷ್ತ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಗೆ ಒಟ್ಟು 34 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಫೆಬ್ರವರಿ ವರೆಗೆ 30.30 ಲಕ್ಷ ಗುರಿ ಸಾಧಿಸಲಾಗಿದ್ದು ಮಾರ್ಚ್ ಅಂತ್ಯದಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಸೂಚಿಸಿದರು.
ವಾಜಪೇಯಿ ನಗರ ವಸತಿ ಯೋಜನೆ , ಡಾ. ಬಿ.ಆರ್. ಅಂಬೇಡ್ಕರ್, ದೇವರಾಜು ಅರಸು ವಸತಿ ಯೋಜನೆ ಮತ್ತು ಪಿ.ಎಂ.ವೈ ನಗರ ಯೋಜನೆಗಳಡಿ ಜಿಲ್ಲೆಯಲ್ಲಿ ಒಟ್ಟು 5682 ಮನೆಗಳು ಅನುಮೋದನೆಯಾಗಿ, 2765 ಮನೆಗಳು ಪೂರ್ಣಗೊಂಡಿದ್ದು ಬಾಕಿ ಉಳಿದ ಮನೆಗಳನ್ನು ಪೂರ್ಣಗೊಳಿಸಿ ಮಾಹಿತಿ ನೀಡಲು ತಿಳಿಸಿದರು.
ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ವೈಯಕ್ತಿಕ ಶೌಚಾಲಯ ನಿರ್ಮಾಣ ಯೋಜನೆಯಡಿ ಗ್ರಾಮೀಣ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮಾಯಕೊಂಡ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಮಾತನಾಡಿ, ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರಿಗೆ ಯೋಜನೆಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಅವರು ಸಹಾಯಕ್ಕಾಗಿ ನೇರವಾಗಿ ನಮ್ಮನ್ನೇ ಸಂಪರ್ಕಿಸಲು ಬರುತ್ತಾರೆ. ಆದ್ದರಿಂದ ಅಧಿಕಾರಿಗಳು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯ ಕೈಗೊಳ್ಳಬೇಕು ಎಂದರು.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂರಕ್ಷಣೆ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ಜಿಲ್ಲೆಯಲ್ಲಿ 46 ಫಲಾನುಭವಿಗಳಿಗೆ ಆಹಾರ ಸಂರಕ್ಷಣಾ ಘಟಕಗಳಿಗೆ ಬ್ಯಾಂಕಿನಿಂದ ರೂ.3.77 ಕೋಟಿ ಸಹಾಯಧನ ಮಂಜೂರಾಗಿದ್ದು, ಅದರಲ್ಲಿ ಜಿಲ್ಲೆಯ 4 ಮಂಡಕ್ಕಿ ಭಟ್ಟಿಗಳೂ ಅನುದಾನ ಪಡೆದುಕೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕೃಷಿ ಇಲಾಖೆಯ 2021-22ನೇ ಸಾಲಿನ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಯಲ್ಲಿ ಜಿಲ್ಲೆಗೆ ನಾಲ್ಕು ಪ್ರಶಸ್ತಿ ಆಯ್ಕೆಯಾಗಿದ್ದು ಅಂತರ ಬೆಳೆಯಾಗಿ ತೊಗರಿ ಬೆಳೆ ಸ್ಪರ್ಧೆಯಲ್ಲಿ 3 ಪ್ರಶಸ್ತಿಗಳು ಜಿಲ್ಲೆಗೆ ಲಭಿಸಿದ್ದರಿಂದ ಅಭಿನಂದನೆ ವ್ಯಕ್ತಪಡಿಸಿದರು.
ಶಾಸಕ ಪೆÇ್ರ.ಎನ್. ಲಿಂಗಣ್ಣ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಇತರರು ಇದ್ದರು.