ನ.೨೫ ರಂದು ಉಚಿತ ಮೂಲವ್ಯಾಧಿ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ದಾವಣಗೆರೆ: ವಿಶ್ವ ಮೂಲವ್ಯಾಧಿ ದಿನದ ಪ್ರಯುಕ್ತ ನ.25ರ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಆಯುಷ್ ಪಂಚಕರ್ಮ ವಿಭಾಗದಲ್ಲಿ ಮೂಲವ್ಯಾಧಿ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೂಲವ್ಯಾಧಿ ರೋಗಗಳಾದ ಪೈಲ್ಸ್, ಫಿಜರ್, ಭಗಂಧರ ರೋಗಗಳಿಗೆ ಹುಲಿಕಟ್ಟೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಆಯುರ್ವೇದ ವೈದ್ಯಾಧಿಕಾರಿ ಡಾ.ಸುಧಾ.ಹೆಚ್.ಎಂ ಹಾಗೂ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆಯುಷ್ ವಿಭಾಗ ಆಯುರ್ವೇದ ವೈದ್ಯಾಧಿಕಾರಿ ಡಾ.ಶಿವಕುಮಾರ್.ಬಿ ಇವರಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ತಿಳಿಸಿದ್ದಾರೆ.