ನೂತನ ಸಚಿವ ಸಂಪುಟದಲ್ಲಿ ಸಿ ಎಂ ಬೊಮ್ಮಾಯಿ ತೆಗೆದುಕೊಂಡ ತೀರ್ಮಾನ ಏನು ಗೊತ್ತಾ.?
ಬೆಂಗಳೂರು: ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಲಾಗಿದ್ದು, ಕೋವಿಡ್ ಟಾಸ್ಕ್ ಫೋರ್ಸ್ ಪುನರ್ರಚನೆ, ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆ ಮತ್ತು ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಿ, ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದರು.
ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿ, ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಯಿತು.
ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸಲು ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದರು.