ಕುವೆಂಪು ವಿ.ವಿ ಪದವಿ ಪೂರ್ಣಗೊಳಸದ ಹಳೇಯ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

Old candidates who have not completed the degree of Kuvempu VV are allowed to write the exam

ದಾವಣಗೆರೆ:   ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ. ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ ( Double the duration) ಮುಗಿದರೂ ಸಹ ಈವರೆಗೂ ಪದವಿ ಪೂರ್ಣ ಗೊಳಿಸಲಾಗದೆ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊನೆಯ ಅವಕಾಶವನ್ನು ನೀಡಲಾಗಿದೆ.
ಸದರಿ ಅವಧಿಯಲ್ಲಿ ಕೋರ್ಸ್‍ಗಳನ್ನು ಪೂರ್ಣಗೊಳಿಸಲಾಗದ ಇಂತಹ ವಿದ್ಯಾರ್ಥಿಗಳಿಗೆ ಏಪ್ರಿಲ್/ಮೇ-2023ರ ಮಾಹೆಯಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ ಪರೀಕ್ಷಾ ಶುಲ್ಕ ಹಾಗೂ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!