ಫೆ.20ರಂದು ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲೋಕಾರ್ಪಣೆ

ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ
ದಾವಣಗೆರೆ: ಇದೇ ಫೆ.21ರ ಮಂಗಳವಾರ ನಗರದ ಬಿಐಇಟಿ ಕಾಲೇಜು ಆವರಣದಲ್ಲಿನ ಎಸ್.ಎಸ್. ಮಲ್ಲಿಕಾರ್ಜುನ್ ಕಲ್ಚರಲ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲೋಕಾರ್ಪಣಾ ಕಾರ್ಯಕ್ರಮವನ್ನು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಿಲ್ಸನ್ ಜಾರ್ಜ್ ಗೂನ್ಸಾಲ್ವಿಸ್ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಒಕ್ಕೂಟದ ಲೋಕಾರ್ಪಣೆ ಹಾಗೂ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ದೂಡಾ ಅಧ್ಯಕ್ಷ ಎ.ವೈ. ಪ್ರಕಾಶ್, ಫೋೋಗ್ರಾಫರ್ ವೆಲ್‌ಫೇರ್ ಅಸೋಸಿಯೇಷನ್ ಆಫ್ ಇಂಡಿಯಾ ನವದೆಹಲಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸಿಂಗ್ ಆಗಮಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಜೆ.ಜಿ., ಸಹ ಕಾರ್ಯದರ್ಶಿ ವಿಜಯ್ ಯು.ಬಿ., ಖಜಂಚಿ ಚಂದ್ರಶೇಖರಯ್ಯ ಹಿರೇಮಠ್, ಸಾರ್ವಜನಿಕ ಸಂಪರ್ಕಾಧಿಕಾರಿ ಬಾಬು ಜಿ.ಎಸ್., ನಿರ್ದೇಶಕ ಹೆಚ್.ಕೆ. ಸಿ.ರಾಜು, ಶಿಕಾರಿ ಶಂಭು, ಕೆ.ಪಿ. ನಾರಾಜ್, ಶ್ರೀನಾಥ ಅಂಗಡಿ, ಬಸವರಾಜ್, ಕಿರಣ್ ಕುಮಾರ್, ಕೆ.ಬಿ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.