ಏಪ್ರಿಲ್ 6ರಂದು ದಾವಣಗೆರೆಯಲ್ಲಿ ಬೃಹತ್ ಶೋಭಾ ಯಾತ್ರೆ

ದಾವಣಗೆರೆ: ಶ್ರೀ ಹನುಮಜಯಂತಿ ಶೋಭಾಯಾತ್ರೆ ಸಮಿತಿ ವತಿಯಿಂದ ಶ್ರೀ ಹನುಮ ಜಯಂತಿ ಅಂಗವಾಗಿ ಇದೇ ಏಪ್ರಿಲ್ 6ರ ಗುರುವಾರ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಗುರುವಾರ ಸಂಜೆ 4.30ಕ್ಕೆ ಶೋಭಾಯಾತ್ರೆ ಆರಂಭವಾಗಲಿದ್ದು, ನಿಜಲಿಂಗಪ್ಪ ಬಡಾವಣೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪಿಜೆ. ಬಡಾವಣೆ ಶ್ರೀರಾಮ ಮಂದಿರದವರೆಗೆ ಶೋಭಾಯಾತ್ರೆ ನಡೆಯಲಿದೆ.
ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಶ್ರೀ ಜಗದೀಶ್ವರ ಅಪ್ಪಾಜಿಯವರು ಆಶೀರ್ವಚನ ನೀಡಲಿದ್ದಾರೆ.